ಬೇಕರಿಗೆ ನುಗ್ಗಿ ಪುಡಿ ರೌಡಿಗಳಿಂದ ದಾಂಧಲೆ, ಹಲ್ಲೆ ಪ್ರಕರಣ: ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಗೃಹ ಸಚಿವರ ಸೂಚನೆ

Prasthutha|

ಬೆಂಗಳೂರು: ಬೆಂಗಳೂರು ಕುಂದನಹಳ್ಳಿ ಗೇಟ್ HAL ಸಮೀಪ ಬೇಕರಿಯೊಂದರ ಮೇಲೆ ನಿನ್ನೆ ನಡೆದ ದಾಂಧಲೆ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರಿಗೆ ಇಂದು ಸೂಚನೆ ನೀಡಿದ್ದಾರೆ.

ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

- Advertisement -

ಶಾಂತಿಯುತವಾಗಿ ಜೀವನ ನಿರ್ವಹಣೆ ಮಾಡಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಶ್ರಮಜೀವಿಗಳಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ರಕ್ಷಣೆ ನೀಡಬೇಕು ಎಂದೂ ಅವರು ಸೂಚಿಸಿದ್ದಾರೆ.

- Advertisement -