Home ಟಾಪ್ ಸುದ್ದಿಗಳು ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಬಗ್ಗೆ ಹಗುರವಾಗಿ ಮಾತನಾಡಿದ್ದ ಗೃಹ ಸಚಿವ ಪರಮೇಶ್ವರ್‌ ಕ್ಷಮೆಯಾಚನೆ

ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಬಗ್ಗೆ ಹಗುರವಾಗಿ ಮಾತನಾಡಿದ್ದ ಗೃಹ ಸಚಿವ ಪರಮೇಶ್ವರ್‌ ಕ್ಷಮೆಯಾಚನೆ

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. “ಲೈಂಗಿಕ ದೌರ್ಜನ್ಯವನ್ನು ಸಹಜಗೊಳಿಸುವುದು ತಮ್ಮ ಹೇಳಿಕೆಯ ಉದ್ದೇಶವಾಗಿರಲಿಲ್ಲ..” ಎಂದು ಪರಮೇಶ್ವರ್‌ ಇದೀಗ ಸ್ಪಷ್ಟಪಡಿಸಿದ್ದಾರೆ.

“ನಿನ್ನೆ ನಾನು ನೀಡಿದ ಹೇಳಿಕೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಲಾಗಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ವ್ಯಕ್ತಿ. ನಿರ್ಭಯಾ ನಿಧಿಯನ್ನು ಮಹಿಳೆಯರ ಸುರಕ್ಷತೆಗಾಗಿ ಚೆನ್ನಾಗಿ ಬಳಸಿಕೊಳ್ಳಲಾಗಿದೆಯೆ ಎಂದು ನಾನು ಖಚಿತಪಡಿಸಿಕೊಂಡಿದ್ದೇನೆ. ನನ್ನ ಹೇಳಿಕೆಯನ್ನು ತಿರುಚುವುದು ನನಗೆ ಇಷ್ಟವಿಲ್ಲ. ಇದರಿಂದ ಯಾವುದೇ ಮಹಿಳೆಯರಿಗೆ ನೋವಾಗಿದ್ದರೆ, ನಾನು ವಿಷಾದ ವ್ಯಕ್ತಪಡಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ..” ಎಂದು ಪರಮೇಶ್ವರ್‌ ಹೇಳಿದ್ದಾರೆ.

ಏನಿದು ಪ್ರಕರಣ?
ಬೆಂಗಳೂರಿನ ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಕಳೆದ ಏ.3(ಗುರುವಾರ)ರ ತಡರಾತ್ರಿ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರನ್ನು ಹಿಂಬಾಲಿಸಿದ್ದ ಯುವಕನೋರ್ವ, ಓರ್ವ ಯುವತಿಯನ್ನು ಏಕಾಏಕಿ ತಬ್ಬಿಕೊಂಡು ಆಕೆಯ ಖಾಸಗಿ ಭಾಗಗಳನ್ನು ಸ್ಪರ್ಶಿಸಿದ್ದ.

ಯುವತಿ ಆಘಾತದಿಂದ ಕೂಗಿಕೊಳ್ಳುತ್ತಿದ್ದಂತೇ, ಯುವಕ ಸ್ಥಳದಿಂದ ಪರಾರಿಯಾಗಿದ್ದ. ಇಡೀ ಘಟನೆ ನೆರೆಯ ಕಟ್ಟಡದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿಯತ್ತು. ಈ ಘಟನೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದದೇ, ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಮೂಡುವಂತೆ ಮಾಡಿತ್ತು.

NO COMMENTS

LEAVE A REPLY

Please enter your comment!
Please enter your name here

Exit mobile version