ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕುತ್ತೇವೆ: ದಿವ್ಯಾ ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ

Prasthutha|

ಬೆಂಗಳೂರು: ಗೌರವಯುತವಾಗಿ ಶರಣಾಗಿ ಇಲ್ಲದಿದ್ದರೆ ಶೀಘ್ರವೇ ಆಸ್ತಿ ಮುಟ್ಟುಗೋಲು ಹಾಕುತ್ತೇವೆ ಎಂದು ದಿವ್ಯಾ ಹಾಗರಗಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

- Advertisement -


545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಶೀಘ್ರವೇ ದಿವ್ಯಾ ಹಾಗರಗಿ ಅವರನ್ನು ಬಂಧಿಸಲಾಗುವುದು. ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ. ಅವರು ಊರು ಬಿಟ್ಟಿದ್ದಾರೆ.

ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಕೊಟ್ಟಿದ್ದಾರೆ. ಶೀಘ್ರವೇ ಅವರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ. ಗೌರವಯುತವಾಗಿ ಬಂದು ಶರಣಾಗಬೇಕು. ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಮುಖ್ಯಮಂತ್ರಿ ಗಮನಕ್ಕೆ ತಂದು ಮಾಡಿದ್ದೇನೆ. ಹಣಕ್ಕಾಗಿ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್ ಅನ್ನು ಹೊರಗೆ ತರುತ್ತೇವೆ ಎಂದು ತಿಳಿಸಿದರು.



Join Whatsapp