Home ರಾಜ್ಯ ABVP ಕಾರ್ಯಕರ್ತರಿಂದ ಗೃಹ ಸಚಿವರ ಮನೆಗೆ ಮುತ್ತಿಗೆ ಪ್ರಕರಣ: PSI ಸೇರಿ ಇಬ್ಬರು ಪೊಲೀಸರ ಅಮಾನತು

ABVP ಕಾರ್ಯಕರ್ತರಿಂದ ಗೃಹ ಸಚಿವರ ಮನೆಗೆ ಮುತ್ತಿಗೆ ಪ್ರಕರಣ: PSI ಸೇರಿ ಇಬ್ಬರು ಪೊಲೀಸರ ಅಮಾನತು

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಗೆ ಮುತ್ತಿಗೆ ಹಾಕಿ ದಾಂದಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪ್ರತಿಭಟನೆ ನಿಯಂತ್ರಣ ವೇಳೆ ಕರ್ತವ್ಯ ಲೋಪ ಆರೋಪದಡಿ ಜೆ.ಸಿ.ನಗರ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಪಿಎಸ್‌ಐ ರಾಜ್‌ ಸಾಬ್ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಶ್ರೀನಿವಾಸ್‌ ಮೂರ್ತಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪೊಲೀಸ್‌ ಅಧಿಕಾರಿಗಳನ್ನು ವಜಾಗೊಳಿಸಿ ಡಿಸಿಪಿ ವಿನಾಯಕ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಪಿಎಸ್‌ಐ ರಾಜ್‌ಸಾಬ್‌ ಅವರಿಗೆ ಪ್ರಭಾರಿ ಠಾಣಾಧಿಕಾರಿ ಜವಾಬ್ದಾರಿ ನೀಡಲಾಗಿತ್ತು. ಪ್ರತಿಭಟನಾನಿರತರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ವೇಳೆ ತ್ವರಿತ ಕ್ರಮಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ್ದಾರೆಂದು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ

Join Whatsapp
Exit mobile version