ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಗೃಹ ಸಚಿವಾಲಯ ನಿರ್ಧಾರ: ಕ್ರೀಡಾ ಸಚಿವ ಅನುರಾಗ್ ಠಾಕೂರ್

Prasthutha|

ನವದೆಹಲಿ: ಆಟಗಾರರ ಭದ್ರತೆ ಪ್ರಮುಖ ವಿಷಯವಾಗಿರುವುದರಿಂದ ಮುಂದಿನ ವರ್ಷದ ಏಷ್ಯಾಕಪ್ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಕುರಿತು ಗೃಹ ಸಚಿವಾಲಯವು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

- Advertisement -

ಮುಂದಿನ ವರ್ಷ 50 ಓವರ್’ಗಳ ವಿಶ್ವಕಪ್’ನಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡವು ಭಾರತಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಎಲ್ಲರನ್ನೂ ಸ್ವಾಗತಿಸಲಾಗುವುದು ಎಂದು ಅವರು ತಿಳಿಸಿದರು.

ಏಷ್ಯಾಕಪ್ ಪಂದ್ಯಾಕೂಟದಲ್ಲಿ ಆಡಲು ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಮತ್ತು ಅವರು ತಟಸ್ಥ ಸ್ಥಳದಲ್ಲಿ ಪಂದ್ಯಾವಳಿಯನ್ನು ಆಡಲು ಬಯಸುತ್ತಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದರು.

- Advertisement -

ಇದು ಭಾರತದಲ್ಲಿ ನಡೆಯುವ ವಿಶ್ವಕಪ್’ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿತ್ತು.



Join Whatsapp