ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ ಸೆಟ್ ಅನ್ನು ನೀಡಿದೆ. CAAಯ ಮೊದಲ ಹಂತದಲ್ಲಿ ಕೇಂದ್ರ ಸರ್ಕಾರವು 14 ಜನರಿಗೆ ಭಾರತೀಯ ಪೌರತ್ವವನ್ನು ನೀಡಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ 14 ಜನರಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.
2014ರ ಡಿಸೆಂಬರ್ 31ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಡಿಸೆಂಬರ್ 2019ರಲ್ಲಿ CAA ಅನ್ನು ಜಾರಿಗೊಳಿಸಲಾಗಿತ್ತು. ಇವರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.