Home ಟಾಪ್ ಸುದ್ದಿಗಳು ಗೃಹಿಣಿ ಅನುಮಾನಾಸ್ಪದ ಸಾವು

ಗೃಹಿಣಿ ಅನುಮಾನಾಸ್ಪದ ಸಾವು

ರಾಯಚೂರು: ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ನೇತಾಜಿ ನಗರದಲ್ಲಿ ನಡೆದಿದೆ.

ಶಿಲ್ಪಾ(28) ಮೃತ ಗೃಹಿಣಿ. ಮನೆ ಮಹಡಿಯ ಮೇಲಿಂದ ಬಿದ್ದು ಮಹಿಳೆ ಮೃತಪಟ್ಟಿದ್ದು, ಮಹಿಳೆಯ ಗಂಡನ ಕುಟುಂಬಸ್ಥರ ವಿರುದ್ಧ ಹತ್ಯೆ ಆರೋಪ ಕೇಳಿಬಂದಿದೆ.

ಮೃತಳ ಪತಿ ಶರತ್, ತಾಯಿ ಶಶಿಕಲಾ ಹಾಗೂ ತಂದೆ ಸುರೇಶ್ ವಿರುದ್ಧ ಹತ್ಯೆ ಆರೋಪ ಕೇಳಿಬಂದಿದೆ.
ಮಂಗಳವಾರ ರಾತ್ರಿ ಪತಿ ಹಾಗೂ ಪೋಷಕರು ಶಿಲ್ಪಾಳನ್ನು ಕೊಂದು, ಬಳಿಕ ಎರಡನೇ ಮಹಡಿಯಿಂದ ತಳ್ಳಿ ಕೊಲೆಗೈದಿದ್ದಾರೆ ಎನ್ನಲಾಗಿದೆ. ಶಿಲ್ಪಾ ಮಹಡಿ ಮೇಲಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Join Whatsapp
Exit mobile version