Home ಟಾಪ್ ಸುದ್ದಿಗಳು ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಲಕ್ಷ್ಮೀ ಹೆಬ್ಬಾಳ್ಕರ್

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.


ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೇ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ; ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Join Whatsapp
Exit mobile version