ಭೀಮಾತೀರದಲ್ಲಿ ಮರ್ಯಾದೆ ಹತ್ಯೆ : ಪ್ರೇಯಸಿಯ ಕಣ್ಣೆದುರೇ ಪ್ರಿಯಕರನ ಬರ್ಬರ ಕೊಲೆ

Prasthutha: October 23, 2021

ವಿಜಯಪುರ : ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ನಡೆದಿದ್ದು ಪ್ರೇಯಸಿಯ ಕಣ್ಣೆದುರೇ ಪ್ರಿಯಕರನನ್ನು ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ.


ಪ್ರೇಯಸಿಯ ಕಣ್ಣೆದುರೇ ಪ್ರಿಯಕರ ರವಿ ನಿಂಬರಗಿ(32)ಯನ್ನು ಭೀಕರವಾಗಿ ಕೊಲೆಗೈದು ಶವವನ್ನೂ ಕೊಂಡೊಯ್ದಿದ್ದಾರೆ.ಕಳೆದ ಮೂರ್ನಾಲ್ಕು ವರ್ಷದಿಂದ ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ರವಿಯನ್ನು ಕೊಲೆಗೈಯಲು ಸಂಚು ರೂಪಿಸಲಾಗಿತ್ತು.

8 ಮಂದಿಯ ತಂಡ ದಾಳಿ ಮಾಡಿರವಿಯನ್ನು ಕೊಲೆಗೈದಿದೆ. ವಿಷಯ ತಿಳಿಯುತ್ತಿದ್ದಂತೆ ಯುವಕನ ಮನೆಗೆ ಓಡೋಡಿ ಬಂದು ಯುವತಿ ವಿಷಯ ಮುಟ್ಟಿಸಿದ್ದಾರೆ. ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಕೊಲೆಗಾರರು ಹಾಗೂ ಮೃತದೇಹದ ಪತ್ತೆಗೆ ತೀವ್ರ ಶೋಧ ಕೈಗೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!