Home ಟಾಪ್ ಸುದ್ದಿಗಳು ಭೀಕರ ರಸ್ತೆ ಅಪಘಾತ: ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಮೃತ್ಯು

ಭೀಕರ ರಸ್ತೆ ಅಪಘಾತ: ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಮೃತ್ಯು

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ನಗರದ ಹೊರವಲಯದಲ್ಲಿ ನಡೆದಿದೆ.

ಅಪಘಾತದಲ್ಲಿ ಇಲಾಖೆಯ ಚಾಲಕ ರಫೀಕ್ ನದಾಪ್ (34) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ವಾಣಿಜ್ಯ ತೆರಿಗೆಯ ಇಲಾಖೆಯ ಇಬ್ಬರು ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗದಗ ರಸ್ತೆಯ ರಿಂಗ್ ರೋಡ್ ಬಳಿ ಮೂರು ವಾಹನಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಇಲಾಖೆಯ ಟಾಟಾ ಸುಮೋ ವಾಹನಕ್ಕೆ ಹಿಂಬಂದಿಯಿಂದ ಲಾರಿ ಬಂದು ಡಿಕ್ಕಿಹೊಡೆದಿದೆ. ಜಾಗೃತಿ ಕಾರ್ಯಕ್ಕಾಗಿ ಅಧಿಕಾರಿಗಳೊಂದಿಗೆ ಅವರು ತೆರಳಿದ್ದರು ಎಂದು ತಿಳಿದು ಬಂದಿದೆ.

Join Whatsapp
Exit mobile version