Home ಟಾಪ್ ಸುದ್ದಿಗಳು ಹೊಸನಗರ: ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್

ಹೊಸನಗರ: ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್

ಶಿವಮೊಗ್ಗ: ವಿಕೃತ ಕಾಮಿಯೊಬ್ಬ  ಚಿಕ್ಕಮ್ಮನ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹೊಸನಗರ ತಾಲೂಕಿನ ಹಳ್ಳಿಯೊಂದರಲ್ಲಿನಡೆದಿದೆ.

ಆರೋಪಿಯನ್ನು ಅರುಣ್ ಎಂದು ಗುರುತಿಸಲಾಗಿದೆ. ಪದೇ ಪದೇ ಚಿಕ್ಕಮ್ಮನಿಗೆ ತೊಂದರೆ ಕೊಡುತ್ತಿದ್ದ ಈತ, ಬಟ್ಟೆ ಒಗೆಯುತ್ತಿದ್ದಾಗ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ತಕ್ಷಣವೇ ಅಲ್ಲಿದ್ದ ಬೇಲಿಗೂಟ ಕಿತ್ತು ಮಹಿಳೆ ಆತನಿಂದ ತಪ್ಪಿಸಿಕೊಂಡಿದ್ದಾರೆ.

ಮಹಿಳೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂತ್ರಸ್ತೆಯ ರಕ್ಷಣೆಗೆ ನಿಂತಿರುವ  ಪೊಲೀಸರು ಎಫ್ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Join Whatsapp
Exit mobile version