ಹೊಸಕೋಟೆ: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಮೃತ್ಯು

Prasthutha|

ಹೊಸಕೋಟೆ: ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ.

- Advertisement -

ಹೊಸಕೋಟೆಯ ಕಾವೇರಿನಗರ ನಿವಾಸಿ ಸಿದ್ದಗಂಗಮ್ಮ (60) ಮೃತರು.

ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ಪುಲಿಯೋಗರೆ, ಪಾಯಸ, ಲಡ್ಡು ಸೇವಿಸಿದ್ದರು ಎನ್ನಲಾಗಿದೆ. ದೇವಾಲಯಗಳಲ್ಲಿ ಪ್ರಸಾದ ತಿಂದಿದ್ದ 100ಕ್ಕೂ ಹೆಚ್ಚು ಭಕ್ತರು ರಾತ್ರಿಯಿಂದ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ.

Join Whatsapp