ಮಂಗಳೂರು | ಮನೆಯವರಿಗೆ ಪೋನ್ ಕರೆ ಮಾಡಲು ನಿರಾಕರಣೆ: ಹಾಸ್ಟೆಲ್ ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಮಂಗಳೂರು: ಹಾಸ್ಟೆಲ್ ನಿಂದ ಮನೆಗೆ ಫೋನ್ ಮಾಡಲು ಬಿಡಿಲಿಲ್ಲ ಎಂದು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ.

- Advertisement -

9 ನೇ ತರಗತಿ ಪೂರ್ವಾಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version