Home ಟಾಪ್ ಸುದ್ದಿಗಳು ಹಗೆತನದಿಂದ ಉಪಯೋಗವಿಲ್ಲ: ಇರಾನ್ ಮೇಲೆ ಇಸ್ರೇಲ್ ದಾಳಿಗೆ ಭಾರತ ಕಳವಳ

ಹಗೆತನದಿಂದ ಉಪಯೋಗವಿಲ್ಲ: ಇರಾನ್ ಮೇಲೆ ಇಸ್ರೇಲ್ ದಾಳಿಗೆ ಭಾರತ ಕಳವಳ

ನವದೆಹಲಿ: ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ಮತ್ತೊಮ್ಮೆ ಮಧ್ಯಪ್ರಾಚ್ಯ ದೇಶದಲ್ಲಿ ಯುದ್ಧಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಒತ್ತಾಯಿಸಿದೆ.

ಯುದ್ಧ ಮಾಡುವ ರಾಷ್ಟ್ರಗಳು ಹಗೆತನದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಭಾರತ ಹೇಳಿದೆ.

“ಪಶ್ಚಿಮ ಏಷ್ಯಾದಲ್ಲಿ ವಿಕಸನಗೊಳ್ಳುತ್ತಿರುವ ಉಲ್ಬಣ, ಅಶಾಂತಿ ಮತ್ತು ಅಸ್ಥಿರತೆಗಾಗಿ ನಾವು ತೀವ್ರ ಕಳವಳ ಹೊಂದಿದ್ದೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಸಂಯಮವನ್ನು ಉಳಿದಿಕೊಂಡು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ಎಲ್ಲ ದೇಶಗಳಿಗೂ ನಾವು ನಮ್ಮ ಕರೆಯನ್ನು ಪುನರುಚ್ಚರಿಸುತ್ತೇವೆ. ನಡೆಯುತ್ತಿರುವ ಹಗೆತನದಿಂದ ಅಮಾಯಕ ಜನರು ಬಳಲುತ್ತಿದ್ದಾರೆ.” ಎಂದು ಭಾರತ ಹೇಳಿದೆ.

Join Whatsapp
Exit mobile version