Home ಟಾಪ್ ಸುದ್ದಿಗಳು ಗೃಹಿಣಿ ಅನುಮಾನಾಸ್ಪದ ಸಾವು

ಗೃಹಿಣಿ ಅನುಮಾನಾಸ್ಪದ ಸಾವು

ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಮೃತ ಮಹಿಳೆಯನ್ನು ನಿಹಾರಿಕಾ ಎಂದು ತಿಳಿದು ಬಂದಿದೆ. ಈಕೆ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಇವರ ಮೃತದೇಹವು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಳ ಕುಟುಂಬಸ್ಥರು ಗಂಡನೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.


ಕೆಳ ದಿನಗಳ ಹಿಂದೆ ಗಂಡನ ಕಿರುಕುಳ ತಾಳಲಾರದೆ ನಿಹಾರಿಕಾ ಅಕ್ಕನ ಮನೆ ಸೇರಿದ್ದರು. ಆದರೆ ಎರಡು ದಿನಗಳ ಹಿಂದೆಯಷ್ಟೇ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಹೇಳಿ ಕರೆದುಕೊಂಡು ಹೋಗಿದ್ದ.
ಶಾಲೆಯ ಕಾರ್ಯಕ್ರಮಕ್ಕೆ ತೆರಳುವ ವಿಚಾರವಾಗಿ ನಿಹಾರಿಕಾಗೆ ನಿಂದಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ.

Join Whatsapp
Exit mobile version