ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ನ ಸದಸ್ಯ ರಿಯಾಝ್ ಭಾಟಿ, ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ಮಹಾರಾಷ್ಟ್ರ ಸಚಿವ, ಎನ್.ಸಿ.ಪಿ ವಕ್ತಾರ ನವಾಬ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಮಾತ್ರವಲ್ಲ ರಾಷ್ಟ್ರೀಯ ಭದ್ರತೆಗೆ ಮಾರಕವಾಗಿರುವ ಈ ಬೆಳವಣಿಗೆ ತಪ್ಪಲ್ಲವೇ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ನಡುವಿನ ವಾಕ್ಸಮರದ ಮಧ್ಯೆ ಈ ಹೇಳಿಕೆ ಹೊರಬಿದ್ದಿದೆ. ವಿರೋಧ ಪಕ್ಷದ ಫಡ್ನವಿಸ್ ಅವರು ನವಾಬ್ ಮಲಿಕ್ ವಿರುದ್ಧ ಭೂಗತ ಜಗತ್ತಿನೊಂದಿಗೆ ನಂಟಿನ ಆರೋಪಕ್ಕೆ ತಿಗುಗೇಟು ನೀಡಿದ ನವಾಬ್ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದಾವೂದ್ ಗ್ಯಾಂಗ್ ನ ಸದಸ್ಯನೊಬ್ಬ ಭಾಗವಹಿಸಿದ್ದಾನೆ ಎಂಬ ಗಂಭೀರ ಆರೋಪ ಹೊರಿಸುವ ಮೂಲಕ ರಾಷ್ಟ್ರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.
ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ರಿಯಾಝ್ ಭಾಟಿ ದಾವೂದ್ ಇಬ್ರಾಹಿಂ ಜೊತೆ ನಂಟು ಹೊಂದಿದ್ದ ಎಂದು ನವಾಬ್ ತಿಳಿಸಿದರು. ಮಾತ್ರವಲ್ಲ ಫಡ್ನವಿಸ್ ಮುಖ್ಯಮಂತ್ರಿ ಆಗಿದ್ದ ವೇಳೆ ಬಿಜೆಪಿ ಕಾರ್ಯಕ್ರಮದಲ್ಲೂ ಕೂಡ ಭಾಗವಹಿಸಿದ್ದ ಎಂದು ತಿಳಿಸಿದರು.
2008ರ ಬ್ಯಾಚ್ನ ಐಆರ್ಎಸ್ ಅಧಿಕಾರಿ ಸಮೀರ್ ವಾಂಖೆಡೆ ಪ್ರಕರಣದ ಉಸ್ತುವಾರಿ ವಹಿಸಿದ್ದರು ಎಂದು ಮಲಿಕ್ ಆರೋಪಿಸಿದ್ದಾರೆ.