ಬಿಜೆಪಿ ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು: ಡಿ.ಕೆ. ಶಿವಕುಮಾರ್ ಪ್ರಶ್ನೆ

Prasthutha|

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಿದ್ದರು ಎಂಬುದನ್ನು ಹೇಳಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

- Advertisement -


ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇರುವುದರಿಂದ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆ ಇರುವುದರಿಂದ 2 ತಾಸು ವಿದ್ಯುತ್ ಸಮಸ್ಯೆ ಆಗುತ್ತೆ .10,000 ಎಕರೆಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಪ್ಲ್ಯಾನ್ ಇದೆ. ಈಗಾಗಲೇ ಇಂಧನ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸೆಂಟ್ರಲ್ ಗ್ರಿಡ್ನಿಂದ ವಿದ್ಯುತ್ ಕೊಟ್ಟರೇ ನಮಗೆ ಅನುಕೂಲ ಆಗುತ್ತೆ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಕೇಂದ್ರ ಸರ್ಕಾರದ ಸಹಾಯ ಮಾಡಬೇಕು ಎನ್ನುವ ಅರ್ಥದಲ್ಲಿ ಹೇಳಿದರು. ಇನ್ನು ಒದೇ ವೇಳೆ ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಳೆ ಬಿದ್ದಿದಿದ್ರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ ಅಲ್ವಾ ಅವರ ಕಾಲದಲ್ಲಿ ಎಷ್ಟು ಸಮಸ್ಯೆ ಆಗಿತ್ತು ಎನ್ನುವುದನ್ನು ತಿಳಿಸಲಿ ಎಂದು ತಿರುಗೇಟು ನೀಡಿದರು.


ಇನ್ನು ಈ ಲೋಡ್ ಶೆಡ್ಡಿಂಗ್ ಬಗ್ಗೆ ಸ್ವತಃ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಲೋಡ್ ಶೆಡ್ಡಿಂಗ್ ಸಮಸ್ಯೆ ಇದೆ, ಲೋಡ್ ಶೆಡ್ಡಿಂಗ್ ಇರುವುದು ಸತ್ಯ. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದು, ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುತ್ತೇವೆ ಎಂದು ತಿಳಿಸಿದರು.

Join Whatsapp