ವಯನಾಡು: ವಯನಾಡು ಲೋಕಸಭಾ ಉಪಚುನಾವಣಾ ಕಣದಲ್ಲಿರುವ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದು ಅಫಿಡವಿತ್‌ನಲ್ಲಿ ಆಸ್ತಿ ಘೋಷಣೆ ಮಾಡಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 12 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರೆ, ಅವರ ಪತಿ ರಾಬರ್ಟ್ ವಾದ್ರಾ ಅವರು ಸುಮಾರು 66 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.
ಬಾಡಿಗೆ, ಬ್ಯಾಂಕ್ ಬಡ್ಡಿ ದರ, ಇತರ ಹೂಡಿಕೆಯಿಂದ 2023-24ರ ಹಣಕಾಸು ವರ್ಷದಲ್ಲಿ 46.39 ಲಕ್ಷ ರೂ. ಆದಾಯ ಬಂದಿದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ಪ್ರಿಯಾಂಕಾ 4.24 ಕೋಟಿ ರೂ. ಚರಾಸ್ತಿ, 7.74 ಕೋಟಿ ರೂ. ಸ್ಥಿರಾಸ್ತಿಯನ್ನು ಹೊಂದಿದ್ದಾರೆ.
ಪ್ರಿಯಾಂಕಾ ಅವರ ಅತ್ಯಮೂಲ್ಯ ಆಸ್ತಿ ಶಿಮ್ಲಾ ಬಳಿಯಿರುವ ಅವರ 12,000 ಚದರ ಅಡಿ ಫಾರ್ಮ್‌ಹೌಸ್ ಆಗಿದೆ. ಅಫಿಡವಿಟ್ ಪ್ರಕಾರ ಇದರ ಪ್ರಸ್ತುತ ಮಾರುಕಟ್ಟೆ ಮೌಲ್ಯ 5.64 ಕೋಟಿ ರೂ. ಆಗಿದೆ. 8 ಲಕ್ಷ ರೂ. ಮೌಲ್ಯದ ಹೋಂಡಾ ಸಿಆರ್‌ವಿ ಕಾರನ್ನು ಹೊಂದಿದ್ದಾರೆ. ಇದನ್ನು ಪತಿ ವಾದ್ರಾ ಉಡುಗೊರೆ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ