ಶೋಭಾ ಕರಂದ್ಲಾಜೆ ಆಸ್ತಿ ಎಷ್ಟು?

Prasthutha|

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಆಸ್ತಿ ವಿವರ ಇಂತಿದೆ:

ಶೋಭಾ ಕರಂದ್ಲಾಜೆ ಒಟ್ಟು 16.02 ಕೋಟಿ ಆಸ್ತಿಯನ್ನು ಹೊಂದಿದ್ದಾರೆ.
ಚರಾಸ್ತಿ – 9,23,66,909 ರೂಪಾಯಿ ಮೌಲ್ಯ.
ಸ್ಥಿರಾಸ್ತಿ – 6,78,97,000 ರೂಪಾಯಿ ಮೌಲ್ಯ.
ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ 4.06 ಕೋಟಿ ರೂ.

- Advertisement -

ಶೋಭಾ ಕರಂದ್ಲಾಜೆ ಬಳಿ ಒಂದು ಕೆಜಿ ಚಿನ್ನದ ಬಿಸ್ಕಟ್,(68.40 ಲಕ್ಷ ಮೌಲ್ಯ) 650‌ ಗ್ರಾಂ ಚಿನ್ನದ ಆಭರಣಗಳಿವೆ. 1620 ಗ್ರಾಂ ಬೆಳ್ಳಿ ಆಭರಣ ‌ಹಾಗೂ ಬೆಳ್ಳಿ ವಸ್ತುಗಳು ಇವೆ.

ಶೋಭಾ ಕರಂದ್ಲಾಜೆ ಅವರ ವಾರ್ಷಿಕ ಆದಾಯ 2022-23ರಲ್ಲಿ 24.90 ಲಕ್ಷ ರೂಪಾಯಿ. ಅವರ ಬಳಿ ಇರುವ ನಗದು ಹಣ 1,71,000 ರೂಪಾಯಿ.

ಶೋಭಾ ಕರಂದ್ಲಾಜೆ ವಿರುದ್ಧ ಒಟ್ಟು ನಾಲ್ಕು ಮೊಕದ್ದಮೆಗಳು ಇತ್ಯರ್ಥಕ್ಕೆ ಬಾಕಿ ಇವೆ. ಇದರಲ್ಲಿ ಎರಡು ಕ್ರಿಮಿನಲ್ ಕೇಸ್, 1 ಮಾನನಷ್ಟ ಮೊಕದ್ದಮೆಯಾಗಿದೆ.



Join Whatsapp