Home ಟಾಪ್ ಸುದ್ದಿಗಳು ವಿಜಯೇಂದ್ರ ಕೈಕೆಳಗೆ ನಾವು ಹೇಗೆ ಕೆಲಸ ಮಾಡುವುದು: ರಮೇಶ್ ಜಾರಕಿಹೊಳಿ ಅಸಮಾಧಾನ

ವಿಜಯೇಂದ್ರ ಕೈಕೆಳಗೆ ನಾವು ಹೇಗೆ ಕೆಲಸ ಮಾಡುವುದು: ರಮೇಶ್ ಜಾರಕಿಹೊಳಿ ಅಸಮಾಧಾನ

ಬೆಳಗಾವಿ: ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದರೆ ಒಪ್ಪುತ್ತಿದ್ದೆವು. ಆದರೆ, ನಮಗಿಂತ ಕಿರಿಯ ವಯಸ್ಸಿನ ಬಿವೈ ವಿಜಯೇಂದ್ರ ಕೈ ಕೆಳಗೆ ಕೆಲಸ ಮಾಡೋದು ಹೇಗೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.


ಕೇಂದ್ರದ ವೀಕ್ಷಕರ ಎದುರು ತಮ್ಮ ಬೇಸರ ವ್ಯಕ್ತಪಡಿಸಿದ ಅವರು, ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದರೆ ಅದನ್ನು ಹೆಮ್ಮೆಯಿಂದ ಗೌರವಿಸುತ್ತಿದ್ದೆವು. ಆದರೆ ನಮಗಿಂತ ಕಿರಿಯ ವಯಸ್ಸಿನ ಬಿವೈ ವಿಜಯೇಂದ್ರ ಕೈ ಕೆಳಗೆ ಕೆಲಸ ಮಾಡೋದು ಹೇಗೆ? ಎಂದು ಪ್ರಶ್ನಿಸಿದ್ದಾರೆ.


ಇನ್ನು ರಾಜಾಧ್ಯಕ್ಷರ ನೇಮಕ ವಿಚಾರವಾಗಿ ಪಕ್ಷದಲ್ಲಿ ಅನುಭವಿ ಹಿರಿಯ ನಾಯಕರನ್ನು ಪರಿಗಣಿಸಬಹುದಾಗಿತ್ತು ಆದರೆ ಹೈಕಮಾಂಡ್ ಈ ವಿಚಾರವಾಗಿ ನಿರ್ಲಕ್ಷ ತೋರಿದೆ ಎಂದು ನೇರವಾಗಿ ವೀಕ್ಷಕರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version