ಹಿಜಾಬ್ ನಿಷೇಧ: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ

Prasthutha|

ನವದೆಹಲಿ: ಹಿಜಾಬ್ ಇಸ್ಲಾಮ್ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

- Advertisement -

ಕರ್ನಾಟಕ ಮೂಲದ ವಿದ್ಯಾರ್ಥಿನಿ ನಿಬಾ ರಾಝ್ ಅವರು ವಕೀಲರಾದ ಅನಸ್ ತನ್ವೀರ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಹಿಜಾಬ್ ಧರಿಸುವ ಹಕ್ಕು ಅಭಿವ್ಯಕ್ತಿ ವ್ಯಾಪ್ತಿಗೆ ಬರುತ್ತದೆ ಮತ್ತು ಸಂವಿಧಾನದ 19(1) ಎ ಪರಿಚ್ಛೇದದ ಅಡಿಯಲ್ಲಿ ಸಂರಕ್ಷಣೆ ಮಾಡಲಾಗಿದೆ. ಈ ವಿಷಯವನ್ನು ಪರಿಗಣಿಸಲು ಹೈಕೋರ್ಟ್ ವಿಫಲವಾಗಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

- Advertisement -

ಹಿಜಾಬ್ ಧರಿಸುವ ಹಕ್ಕು ಭಾರತದ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಖಾಸಗಿತನದ ಹಕ್ಕಿನ ವ್ಯಾಪ್ತಿಗೊಳಪಡುತ್ತದೆ ಎಂಬ ಅಂಶವನ್ನು ಗಮನಿಸುವಲ್ಲಿ ಹೈಕೋರ್ಟ್ ವಿಫಲವಾಗಿದೆ ಎಂದು ಪ್ರತಿಪಾದಿಸಲಾಗಿದೆ.

ಈ ಮಧ್ಯೆ ಹಿಂದೂ ಸೇನೆ ಸುಪ್ರೀಮ್ ಕೋರ್ಟ್ ಗೆ ಕೇವಿಯಟ್ ಸಲ್ಲಿಸಿ ಈ ಪ್ರಕರಣದಲ್ಲಿ ತಮ್ಮ ಅಭಿಪ್ರಾಯವನ್ನೂ ಆಲಿಸಲು ಮನವಿ ಮಾಡಿದೆ.

Join Whatsapp