ಲಕ್ಷ್ಮಿ ಹೆಬ್ಬಾಳ್ಕರ್‌ ಕಾರು ಅಪಘಾತ: ಸಿ.ಟಿ.ರವಿ ಹೇಳಿದ್ದೇನು?

- Advertisement -

ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‌ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.

- Advertisement -

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸಂಭವಿಸಿದ ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಈಚೆಗೆ ನಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತು ಎಂಎಲ್‌ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು.

- Advertisement -


Must Read

Related Articles