Home ಟಾಪ್ ಸುದ್ದಿಗಳು ಹುಬ್ಬಳ್ಳಿ ಗಲಭೆ ಪ್ರಕರಣ: ಇಂದು ಮತ್ತೆ 7 ಜನರ ಬಂಧನ

ಹುಬ್ಬಳ್ಳಿ ಗಲಭೆ ಪ್ರಕರಣ: ಇಂದು ಮತ್ತೆ 7 ಜನರ ಬಂಧನ


ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ 7 ಜನರನ್ನು ಬಂಧಿಸಲಾಗಿದೆ. ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 133 ಜನರನ್ನು ವಶಕ್ಕೆ ಪಡೆಯಲಾಗಿದೆ. ದಿನದಿಂದ ದಿನಕ್ಕೆ ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು 7 ಜನ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಹಳೇ ಹುಬ್ಬಳ್ಳಿಯ ಠಾಣೆಯಿಂದ ವೈದ್ಯಕೀಯ ಪರೀಕ್ಷೆಗೆಂದು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

Join Whatsapp
Exit mobile version