ಹುಬ್ಬಳ್ಳಿ: ಮುಸ್ಲಿಮರ ವಿರುದ್ಧ ಬಜರಂಗದಳ ಕಾರ್ಯಕರ್ತನೋರ್ವ ವಿವಾದಾತ್ಮಕ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹಳೇ ಹುಬ್ಬಳ್ಳಿಯಲ್ಲಿ ನಡೆದ ಘರ್ಷಣೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ AIMIM ಮುಖಂಡ ಮುಹಮ್ಮದ್ ಆರೀಫ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ನಿಂದಾಗಿ ಕೆರಳಿದ್ದ ಸ್ಥಳೀಯ ಯುವಕರು ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರು ಮತ್ತು ಯುವಕರ ಮಧ್ಯೆ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿತ್ತು. ಘಟನೆಗೆ ಸಂಬಂಧಿಸಿ 100ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಇದೀಗ ಗಲಭೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಎಐಎಂಐಎಂ ಮುಖಂಡನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.