ಧಾರವಾಡ: ಹುಬ್ಬಳ್ಳಿಯ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸದ್ದಾಂ ಹುಸೇನ್ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಆರೋಪಿ ಸದ್ದಾಂ ಹುಸೇನ್ ಹಲ್ಲೆ ಮಾಡಿದ್ದರಿಂದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್ಟೇಬಲ್ ಅರುಣ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್ನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.