ಹುಬ್ಬಳ್ಳಿ ಘಟನೆ: ಮುಂದುವರಿದ 144 ಸೆಕ್ಷನ್, 88 ಮಂದಿ ಬಂಧನ

Prasthutha|

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ 88 ಮಂದಿಯನ್ನು ಬಂಧಿಸಲಾಗಿದೆ.

- Advertisement -

ಹುಬ್ಬಳ್ಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಭದ್ರತೆ ಸಲುವಾಗಿ ಸೆಕ್ಷನ್ 144 ಮುಂದುವರಿಸಲಾಗಿದೆ.  ಆರೋಪಿಗಳನ್ನು ಬಂಧಿಸಲು 10 ತಂಡಗಳನ್ನು ರಚಿಸಿರುವ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಹುಬ್ಬಳ್ಳಿ ನಗರದ  ಸುತ್ತಮುತ್ತ ನಾಕಾಬಂಧಿ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಪ್ರಕರಣದಲ್ಲಿ ಹೆಚ್ಚಿನವರನ್ನು ಬಂಧಿಸುವ ಸಾಧ್ಯತೆಯಿದೆ. ಖಾಸಗಿ ವಾಹನಗಳಿಗೆ ಹಾನಿಯಾಗಿರುವುದು ಹಾಗೂ ಸಾರ್ವಜನಿಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿಗಳು ಬಂದಿದ್ದು, ಜನರು ದೂರುಗಳನ್ನು ಠಾಣೆಗೆ ಬಂದು ವರದಿ ಮಾಡಬೇಕೆಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆ ಆದೇಶವನ್ನು ಎಪ್ರಿಲ್ 20ವರೆಗೆ ವಿಸ್ತರಿಸಲಾಗಿದ್ದು, ಪರಿಸ್ಥಿತಿ ಹದಗೆಡದಂತೆ ಇತರೆ ಜಿಲ್ಲೆಗಳಿಗೆ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠರು ಮಾಹಿತಿ ನೀಡಿದ್ದಾರೆ.



Join Whatsapp