ಹುಬ್ಬಳ್ಳಿ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡು

Prasthutha|

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳವು ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

- Advertisement -


ಮುಂಬೈ ಮೂಲದ ಫರ್ಹಾನ್ ಶೇಖ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪಿಎಸ್ಐ ಕವಿತಾ ಮಾಡಗ್ಯಾಳ, ಕಾನ್ಸ್ಟೆಬಲ್ ಮಹೇಶ ಹಾಗೂ ಕವಿತಾ ಅವರನ್ನು ಕಿಮ್ಸ್ಗೆ ದಾಖಲಿಸಲಾಗಿದೆ.

ನಗರದ ರಮೇಶ ಭವನದ ಬಳಿಯಿರುವ ಭುವನೇಶ್ವರಿ ಜ್ಯುವೆಲ್ಲರಿ ಶಾಪ್ ನಲ್ಲಿನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ರಾತ್ರಿ ಕೇಶ್ವಾಪುರ ಠಾಣೆ ಪೊಲೀಸರು ಆರೋಪಿ ಫರ್ಹಾನ್ ಶೇಖ್ ನನ್ನು ವಶಕ್ಕೆ ಪಡೆದಿದ್ದರು.



Join Whatsapp