‘ಆರೋಗ್ಯ ಸಮಸ್ಯೆ ಉಂಟಾದರೆ ನೀವೇ ಜವಾಬ್ದಾರರು’ ಎಂದು ಜಿಲ್ಲಾಧಿಕಾರಿಯಿಂದ ಮುಚ್ಚಳಿಕೆ ಬರೆಸಿದ ಬಳಿಕ ಲಸಿಕೆ ಹಾಕಿಕೊಂಡ ವ್ಯಕ್ತಿ !

Prasthutha|

ಹುಬ್ಬಳ್ಳಿ: “ಕೋವಿಡ್ ಲಸಿಕೆಯಿಂದ ಆರೋಗ್ಯಕ್ಕೇನಾದರೂ ಸಮಸ್ಯೆಯಾದರೆ ನೀವೇ ಜವಾಬ್ದಾರರು” ವ್ಯಕ್ತಿಯೊಬ್ಬರು ಎಂದು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಮುಚ್ಚಳಿಕೆ ಬರೆಸಿಕೊಂಡ ಬಳಿಕ ಲಸಿಕೆ ಹಾಕಿಸಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -


ಭಾನುವಾರ ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ಲಸಿಕಾ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಧಾರ್ಮಿಕ ಮುಖಂಡರ ಸಭೆ ಕರೆಯಲಾಗಿತ್ತು. ಈ ವೇಳೆ ಯಲ್ಲಾಪುರ ನಿವಾಸಿ ಆನಂದ ಕೊನ್ನೂರಕರ ಎಂಬವರು, “ಲಸಿಕೆ ಪಡೆಯಲು ಭಯವಾಗುತ್ತಿದೆ. ಆರೋಗ್ಯದಲ್ಲಿ ಸಮಸ್ಯೆಯಾದರೆ ಯಾರು ಹೊಣೆ ? ಎಂದು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದರು.


ಅವರಿಗೆ ಮನವರಿಕೆ ಮಾಡಿಕೊಡಲು ಅಧಿಕಾರಿಗಳು ಎಷ್ಟೇ ಪ್ರಯತ್ನ ಪಟ್ಟರೂ ಅವರು ಕೇಳುವ ಪರಿಸ್ಥಿತಿಯಲ್ಲಿ ಅವರು ಇರಲಿಲ್ಲ. ಕೊನೆಗೆ ಅವರು ನನಗೆ ಏನೂ ಆಗುವುದಿಲ್ಲ ಎಂದು ನೀವು ಬಾಯಿ ಮಾತಿನಲ್ಲಿ ಹೇಳಿದರೆ ಸಾಕಾಗದು, ಮುಚ್ಚಳಿಕೆ ಬರೆದುಕೊಟ್ಟರೆ ಲಸಿಕೆ ಹಾಕಿಸಿಕೊಳ್ಳುತ್ತೇನೆ ಎಂದು ಹೇಳಿದರು.

- Advertisement -


ಕೊನೆಗೆ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್ ಅವರು “ಲಸಿಕೆಯಿಂದ ಅಡ್ಡ ಪರಿಣಾಮ ಅಥವಾ ದುಷ್ಪರಿಣಾಮ ಉಂಟಾದರೆ ನಾವೇ ಜವಾಬ್ದಾರರು” ಎಂದು ಮುಚ್ಚಳಿಕೆ ಬರೆದು ಅದಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಉಪ ವಿಭಾಗಾಧಿಕಾರಿ ಸಹಿ ಹಾಕಿದ ಬಳಿಕ ಆನಂದ ಕೊನ್ನೂರಕರ ಅವರಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಯಿತು



Join Whatsapp