ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

Prasthutha|

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ವತಿಯಿಂದ ವಿದ್ಯಾರ್ಥಿಗಳು ನಗರದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.

- Advertisement -

ಬಿಆರ್‌ಟಿಎಸ್ ಕಾರಿಡಾರಿನಲ್ಲಿ ಚಿಗರಿ ಬಸ್‌ಗಳ ಸಂಚಾರ ಹಾಗೂ ಹುಬ್ಬಳ್ಳಿ-ಧಾರವಾಡ ನಡುವಿನ ವಾಹನಗಳ‌ ಸಂಚಾರ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.

ಎನ್‌ಎಸ್‌ಯುಐ ಬಾವುಟ ಹಾಗೂ ನೇಹಾ ಸಾವಿಗೆ ನ್ಯಾಯ ಬೇಕು ಎನ್ನುವ ಫಲಕಗಳನ್ನು ಪ್ರದರ್ಶಿಸಿ, ಘೋಷಣೆ ಕೂಗಿದರು. ‘ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲೇಬೇಕು. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು’ ಎಂದು ಆಗ್ರಹಿಸಿದರು.

- Advertisement -

ಡಿಸಿಪಿ ರಾಜೀವ್ ಎಂ. ಅವರಿಗೆ ಮನವಿ ಪತ್ರ ಸಲ್ಲಿಸಿ, ‘ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ರೋಹಿತ್ ಘೋಡಕೆ, ರಫೀಕ್ ಅಲಿ, ರೋಹನ್ ಹಿಪ್ಪರಗಿ, ವಿನಯ ಪಟ್ಟಣಶೆಟ್ಟಿ, ರಾಹುಲ್ ಬೆಳದಡಿ, ಬಸನಗೌಡ ಪಾಟೀಲ, ವಿಶಾಲ ಮಾನೆ, ಕಿರಣ ಗಾಂಧಾಳ, ಕಲ್ಮೇಶ ಉಳ್ಳಾಗಡ್ಡಿ, ನಿಖಿಲ್ ಹಿರೇಮಠ, ಕಿಶೋರ ಸಿರಸಂಗಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ನಗರದಲ್ಲಿ ಪ್ರತಿಭಟನೆಗಳು ಮುಂದುವರೆದಿವೆ.

Join Whatsapp