ಹುಬ್ಬಳ್ಳಿ ಗಲಭೆ ಪ್ರಕರಣ: 11 ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

Prasthutha|

ಧಾರವಾಡ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ದಾಖಲಿಸಿಕೊಂಡಿದ್ದ 12 ಕೇಸ್ ಗಳ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿದೆ.

- Advertisement -

ಹಳೇ ಹುಬ್ಬಳ್ಳಿಯಲ್ಲಿ ಏ. 16ರಂದು ನಡೆದ ಗಲಭೆಗೆ ಸಂಬಂಧಿಸಿ, ಪೊಲೀಸ್ ಠಾಣೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗಲಾಟೆ ಮಾಡಿದ್ದ 157 ಜನರ ವಿರುದ್ಧ 12 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದರು.

ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ದೂರುಗಳನ್ನು ದಾಖಲಿಸಿರುವುದು ಸರಿಯಲ್ಲ. ಹಾಗಾಗಿ ದಾಖಲಿಸಿಕೊಂಡಿರುವ ಪ್ರಕರಣಗಳನ್ನು  ಅನೂರ್ಜಿತಗೊಳಿಸಬೇಕು ಎಂದು ಮುಹಮ್ಮದ್ ಆರೀಫ್ ಸೇರಿದಂತೆ ಇತರ 157 ಜನರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

- Advertisement -

ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್ ನ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, 12 ಪ್ರಕರಣಗಳ ಪೈಕಿ 11 ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

Join Whatsapp