ಯುಎಸ್‌ಎ ವಿರುದ್ಧ 201 ರನ್‌ಗಳ ಬೃಹತ್ ಜಯ: ಸೂಪರ್ ಸಿಕ್ಸ್ ಹಂತಕ್ಕೆ ಭಾರತ

Prasthutha|

.ದಕ್ಷಿಣ ಆಫ್ರಿಕ: ಬ್ಲೋಮ್‌ಫಾಂಟೈನ್‌ನಲ್ಲಿ ನಡೆದ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಯುಎಸ್‌ಎ ವಿರುದ್ಧ 201 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ಸತತ ಮೂರನೇ ಗೆಲುವು ಸಾಧಿಸುವ ಮೂಲಕ ಸೂಪರ್ ಸಿಕ್ಸ್ ಹಂತಕ್ಕೆ ಪ್ರವೇಶ ಪಡೆದುಕೊಂಡಿದೆ.

- Advertisement -

ಟಾಸ್ ಗೆದ್ದ ಯುಎಸ್‌ಎ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಗಳಿಸಿತ್ತು. ಅರ್ಷಿನ್ ಕುಲಕರ್ಣಿ 118 ಎಸೆತಗಳಲ್ಲಿ 108 ರನ್ ಗಳಿಸಿದರೆ, ಮುಷೀರ್ ಖಾನ್ 76 ಎಸೆತಗಳಲ್ಲಿ 73 ರನ್ ಗಳಿಸಿದರು. ನಾಯಕ ಉದಯ್ ಶರಣ್ 35 ರನ್, ಪಿಯಾಂಶು ಮೊಳಿಯಾ 27, ಸಚಿನ್ ದಾಸ್ 20 ರನ್ ಗಳಿಸಿದರು.

ಬೃಹತ್ ಮೊತ್ತವನ್ನು ಬೆನ್ನತ್ತಿದ ಯುಎಸ್‌ಎ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 125 ರನ್ ಮಾತ್ರ ಗಳಿಸಲು ಸಾಧ್ಯವಾಯಿತು. ನಮನ್ ತಿವಾರಿ 9 ಓವರ್ ಗಳಲ್ಲಿ 20 ರನ್ ಬಿಟ್ಟುಕೊಟ್ಟು 4 ವಿಕೆಟ್ ಪಡೆದುಕೊಂಡರು.

- Advertisement -

ಉತ್ಕರ್ಶ್ ಶ್ರೀವಾತ್ಸವ 40 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳು ಹೆಚ್ಚಿನ ರನ್ ಗಳಿಸುವಲ್ಲಿ ವಿಫಲವಾದರು. ಅಮೋಘ್‌ 27 ರನ್, ಸಿದ್ಧಾರ್ಥ್ ಕಪ್ಪ 18, ಆರಿನ್ ನಡ್ಕರ್ಣಿ 20 ರನ್ ಗಳಿಸಿದರು.ಈ ಭರ್ಜರಿ ಗೆಲುವಿನ ಮೂಲಕ ಭಾರತ ತಂಡ ಸೂಪರ್ ಸಿಕ್ಸ್ ಹಂತಕ್ಕೆ ಪ್ರವೇಶಿಸಿದೆ.

ಎ ಗುಂಪಿನಲ್ಲಿರುವ ಭಾರತ ತಂಡ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದೊಂದಿಗೆ ಮುಂದಿನ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ.

ಜನವರಿ 30ರಂದು ನಡೆಯಲಿರುವ ಸೂಪರ್ ಸಿಕ್ಸ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಫೆಬ್ರವರಿ 2ರಂದು ನೇಪಾಳ ತಂಡದ ವಿರುದ್ಧ ಸೂಪರ್ ಸಿಕ್ಸ್ ಹಂತದ ಎರಡನೇ ಪಂದ್ಯವನ್ನಾಡಲಿದೆ.



Join Whatsapp