ಶಿಕ್ಷಣ ನೀತಿ 2020ರಲ್ಲಿ ದೊಡ್ಡ ಮಟ್ಟದ ಬದಲಾವಣೆ ಅಗತ್ಯವಿದೆ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ

Prasthutha|

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಹಲವು ಮಹತ್ವದ ಬದಲಾವಣೆಯ ಮತ್ತು ಈ ಯೋಜನೆಯಲ್ಲಿನ ಕೆಲವು ಕುಂದುಕೊರತೆಗಳನ್ನು ನೀಗಿಸುವ ಅಗತ್ಯವಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ತಿಳಿಸಿದ್ದಾರೆ.

- Advertisement -

ದೆಹಲಿ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಶಿಕ್ಷಕರ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಸೋಡಿಯಾ, ಶಿಕ್ಷಣಕ್ಕೆ ಸಂಬಂಧಿಸಿದ ನೀತಿಗಳು ಪಾರದರ್ಶಕ ದೃಷ್ಟಿಕೋನವನ್ನು ಹೊಂದಿರಬೇಕು ಮತ್ತು ಶಿಕ್ಷಕರ ತರಬೇತಿ ಸೇರಿದಂತೆ ಎಲ್ಲಾ ಅಂಶಗಳನ್ನು ಒಳಗೊಂಡಿರಬೇಕು ಎಂದು ತಿಳಿಸಿದರು.

2020ರಲ್ಲಿ ಕೇಂದ್ರ ಜಾರಿಗೆ ತಂದ ನೂತನ ಶಿಕ್ಷಣ ನೀತಿ (NEP)ಯಲ್ಲಿ ಮಹತ್ವದ ಬದಲಾವಣೆಯ ಅಗತ್ಯವಿದೆ. ಕೆಲವು ಕುಂದುಕೊರತೆಗಳನ್ನು ನೀಗಿಸಬೇಕಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದ ನೀತಿಗಳು ಪಾರದರ್ಶಕ ದೃಷ್ಟಿಕೋನವನ್ನು ಹೊಂದಿರಬೇಕಾಗಿದ್ದು, ಶಿಕ್ಷಕರ ತರಬೇತಿ ಸೇರಿದಂತೆ ಎಲ್ಲಾ ಅಂಶಗಳಲ್ಲಿ ಅದರಲ್ಲಿ ಸೇರಿಸಬೇಕು ಎಂಬುದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ದೂರದೃಷ್ಟಿಯಾಗಿದೆ ಎಂದು ಅವರು ತಿಳಿಸಿದರು.

- Advertisement -

2020ರ ನೂತನ ಶಿಕ್ಷಣ ನೀತಿಯನ್ನು ದೆಹಲಿಯಲ್ಲಿ ತಕ್ಷಣ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸಿಸೋಡಿಯಾ ತಿಳಿಸಿದ್ದಾರೆ.

ದೆಹಲಿಯಲ್ಲಿರುವ ಶಿಕ್ಷಕರಿಗೆ ಉತ್ತಮ ತರಬೇತಿ ಪಡೆಯಲು ದೆಹಲಿ ಸರ್ಕಾರವು ಎಲ್ಲಾ ಸೌಲಭ್ಯಗಳನ್ನು ಒದಗಿಸಿದೆ ಎಂದು ಸಿಸೋಡಿಯಾ ತಿಳಿಸಿದರು.



Join Whatsapp