ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳ

Prasthutha|

ನವದೆಹಲಿ: ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ಪ್ರಕಾರ, ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1,879 ಚಿರತೆಗಳನ್ನು ಹೊಂದುವ ಮೂಲಕ 3ನೇ ಸ್ಥಾನ ಪಡೆದಿದೆ. ಮಧ್ಯಪ್ರದೇಶ 3,907 ಚಿರತೆ ಮೂಲಕ ನಂ.1 ಸ್ಥಾನದಲ್ಲಿದೆ. ಮಹಾರಾಷ್ಟ್ರ 1985 ಚಿರತೆ ಮೂಲಕ ನಂ.2 ಸ್ಥಾನ ಪಡೆದಿವೆ.

- Advertisement -

ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ.

Join Whatsapp