ಯಂತ್ರೋಪಕರಣ ಖರೀದಿಯಲ್ಲಿ ಭಾರೀ ಅವ್ಯವಹಾರ: ಕೃಷಿ ಸಚಿವ ಬಿ. ಸಿ. ಪಾಟೀಲ್ ವಿರುದ್ಧ ಎಸಿಬಿಗೆ ದೂರು

Prasthutha|

ಬೆಂಗಳೂರು: ಕರ್ನಾಟಕದ ಕೃಷಿ ಇಲಾಖೆಯಿಂದ ರಿಯಾಯ್ತಿ ದರದಲ್ಲಿ ವಿತರಿಸುವ ಯಂತ್ರೋಪಕರಣಗಳ ಖರೀದಿಯಲ್ಲಿ ಬೃಹತ್ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ 210 ಕೋಟಿ ಮೊತ್ತದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಆ್ಯಂಟಿ ಕರಪ್ಷನ್ ಫೋರ್ಸ್ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎನ್. ಕೃಷ್ಣಮೂರ್ತಿ, ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.

- Advertisement -


ಇಲಾಖೆಯ ಹೆಚ್ಚುವರಿ ನಿರ್ದೇಶಕ ದಿವಾಕರ್ ಮತ್ತು ಸಚಿವರು ಸೇರಿಕೊಂಡು ಅಕ್ರಮ ಎಸಗಿದ್ದಾರೆ. ದಿವಾಕರ್ ಕೂಡ ಬೇನಾಮಿ ಕಂಪನಿ ಹೊಂದಿರುವ ಆರೋಪವಿದೆ. ಟೆಂಡರ್ ನಲ್ಲಿ ಭಾಗವಹಿಸಿದ್ದ ಕಂಪನಿ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಿದ ಈ ಅಧಿಕಾರಿ, ಬೃಹತ್ ಮೊತ್ತದ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ತುಂತುರು ನೀರಾವರಿಗೆ ಬಳಸುವ ಸ್ಪ್ರಿಂಕ್ಲರ್, ಡೀಸೆಲ್ ಪಂಪ್ಸೆಟ್, ಪವರ್ ಸ್ಪ್ರೇಯರ್, ಬ್ಯಾಟರಿ ಚಾಲಿತ ಬ್ಯಾಕ್ ಸ್ಪ್ರೇಯರ್ ಸೇರಿದಂತೆ ಸಹಾಯಧನ ಯೋಜನೆಗಳ ಅಡಿಯಲ್ಲಿ ವಿತರಿಸಲು ಯಂತ್ರೋಪಕರಣ ಖರೀದಿಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ. ಯಂತ್ರೋಪಕರಣಗಳನ್ನು ಖರೀದಿ ಮಾಡದೆ ನಕಲಿ ಬಿಲ್ ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ. ಪ್ರಭಾವಿ ನಾಯಕರು ಬೇನಾಮಿ ಹೆಸರಿನಲ್ಲಿ ಹೊಂದಿರುವ ಕಂಪನಿಗಳಿಂದ ಯಂತ್ರೋಪಕರಣ ಖರೀದಿಸಿ, ಅಕ್ರಮ ಎಸಗಲಾಗಿದೆ ಎಂದು ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ.

Join Whatsapp