August 5, 2021

ಆಗುಂಬೆ ಘಾಟ್‌ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

ಶಿವಮೊಗ್ಗ, ಆಗಸ್ಟ್ 5; ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಶಿವಮೊಗ್ಗ-ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟ್‌ ರಸ್ತೆಯಲ್ಲಿ ನಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಲಾರಿ ಪ್ರಪಾತದತ್ತ ಮುಖ ಮಾಡಿ ನಿಂತಿದೆ. ಅದೃಷ್ಟವಶಾತ್ ದೊಡ್ಡ ಅಪಾಯ ತಪ್ಪಿದಂತಾಗಿದೆ.
ಗುರುವಾರ ಆಗುಂಬೆ ಘಾಟ್‌ ರಸ್ತೆಯ 6 ಮತ್ತು 7ನೇ ತಿರುವಿನ ಮಧ್ಯೆ ಈ ಘಟನೆ ಸಂಭವಿಸಿದೆ. ಭತ್ತ ತುಂಬಿದ್ದ ಲಾರಿ ಶಿವಮೊಗ್ಗದಿಂದ ಹೆಬ್ರಿಗೆ ತೆರಳುತಿತ್ತು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಮುನ್ನುಗ್ಗಿದೆ.
ಲಾರಿಯ ಚಾಲಕನ್ನು ರಕ್ಷಣೆ ಮಾಡಲಾಗಿದೆ. ಅಪಘಾತದಿಂದಾಗಿ ಕೆಲಕಾಲ ಘಾಟಿಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳೀಯರ ನೆರವಿನಿಂದ ಲಾರಿಯನ್ನು ಎಳೆಯುವ ಕಾರ್ಯ ನಡೆಯುತ್ತಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!