ಹಾಡಹಗಲೇ ಮಾನವ ಹಕ್ಕು ಕಾರ್ಯಕರ್ತನ ಬರ್ಬರ ಹತ್ಯೆ

Prasthutha|

ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಭ್ರಷ್ಟಾಚಾರ ಮತ್ತು ಮಾನವ ಹಕ್ಕು ಸಂಘದ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೆಣ್ಣೂರಿನ ನಾಗವಾರದಲ್ಲಿ ನಡೆದಿದೆ.

- Advertisement -

ಗ್ರಾಮಾಂತರ ಜಿಲ್ಲೆಯ ಮೂಲದ ಶ್ರೀಧರ್ ಹತ್ಯೆಗೀಡಾದ ಮಾನವ ಹಕ್ಕು ಕಾರ್ಯಕರ್ತ.

ನಾಗವಾರದ ಬಳಿ ಇಂದು ಬೆಳಿಗ್ಗೆ ಕಾರಿನಲ್ಲಿ ಹೋಗುತ್ತಿದ್ದಾಗ ಹಿಂಬಾಲಿಸಿಕೊಂಡು ಬೈಕ್ ಗಳಲ್ಲಿ ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳ ಗುಂಪು ಏಕಾಏಕಿ ಶ್ರೀಧರ್ ಮೇಲೆ ಮಾರಕಾಸ್ತ್ರಗಳಿಂದ ಕುತ್ತಿಗೆ ಹಾಗೂ ತಲೆಭಾಗಕ್ಕೆ ಕೊಚ್ಚಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಶ್ರೀಧರ್ ಮೃತಪಟ್ಟಿದ್ದಾರೆ.

- Advertisement -

ಹಲ್ಲೆ ಮಾಡುವಾಗ ಆರೋಪಿಗಳು ತಮಿಳಿನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಮಾಹಿತಿ ಆಧರಿಸಿ ಹೆಣ್ಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳದಲ್ಲಿ ದೊರೆತಿರುವ ಸಾಕ್ಷ್ಯಾಧಾರ ಸಂಗ್ರಹಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಂತಕರ ಪತ್ತೆಗೆ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಡಿಸಿಪಿ ಡಾ. ಶರಣಪ್ಪ ತಿಳಿಸಿದ್ದಾರೆ.

Join Whatsapp