ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ| ಕೇಂದ್ರ ಸಚಿವರೊಂದಿಗೆ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಚರ್ಚೆ

Prasthutha|

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಕೇಂದ್ರ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಭಾರತ ಮತ್ತು ಅಮೆರಿಕದಂತಹ ಮಿತ್ರ ರಾಷ್ಟ್ರಗಳ ನಡುವೆ  ಚರ್ಚೆ ಅನಿವಾರ್ಯವಾಗಿತ್ತು ಎಂದು ಅವರು ಹೇಳಿದ್ದಾರೆ.

- Advertisement -

ಭಾರತದಲ್ಲಿನ ಮಾನವ ಹಕ್ಕುಗಳ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ . ಕೇಂದ್ರ ಸಚಿವರೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ ಎಂದು ಆಸ್ಟಿನ್ ಹೇಳಿದ್ದಾರೆ.  ಈ ವೇಳೆ ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಎದುರಿಸುತ್ತಿರುವ ಮಾನವ ಹಕ್ಕುಗಳ ಸಮಸ್ಯೆಗಳನ್ನೂ ಕೂಡ ಚರ್ಚಿಸಲಾಯಿತು. ಅಮೆರಿಕದ ಸೆನೆಟರ್ ಬಾಬ್ ಮೆನೆಂಡೆಸ್ ಅವರು ಭಾರತ ಪ್ರವಾಸದ ಸಂದರ್ಭದಲ್ಲಿ ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವ ಬಗ್ಗೆ ಚರ್ಚಿಸುವಂತೆ ಲಾಯ್ಡ್ ಆಸ್ಟಿನ್ ಅವರಿಗೆ ಪತ್ರ ಬರೆದಿದ್ದರು. ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾನೂನು ಮತ್ತು ರೈತರ ಹೋರಾಟಗಳ ಹಿನ್ನೆಲೆಯಲ್ಲಿ ಬಾಬ್ ಮೆನೆಂಡೆಸ್ ಈ ವಿನಂತಿಯನ್ನು ಮಾಡಿದ್ದರು.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಮೂರು ದಿವಸಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಉಭಯ ದೇಶಗಳ ನಡುವಿನ ಸಹಕಾರವನ್ನು ಎಲ್ಲಾ ಕ್ಷೇತ್ರಗಳಲ್ಲೂ ಹೆಚ್ಚಿಸುವುದು ಈ ಭೇಟಿಯ ಉದ್ದೇಶವಾಗಿತ್ತು.

Join Whatsapp