ಶ್ರೀಲಂಕಾ ಪ್ರಜೆಗಳ ಮಾನವ ಕಳ್ಳ ಸಾಗಣೆ ಪ್ರಕರಣ | ಆರೋಪಿಗಳ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ NIA ಅರ್ಜಿ

Prasthutha|

ಮಂಗಳೂರು ನಗರ ಪೊಲೀಸರು ಭೇದಿಸಿದ್ದ ಪ್ರಕರಣ

- Advertisement -

ಬೆಂಗಳೂರು: ಶ್ರೀಲಂಕಾದ ಪ್ರಜೆಗಳನ್ನು ಭಾರತಕ್ಕೆ ಕರೆತಂದು ಇಲ್ಲಿಂದ ವಿದೇಶಕ್ಕೆ ಕಳ್ಳಸಾಗಣೆ ಮಾಡುವ ಜಾಲದ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಎನ್.ಐ.ಎ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ.

ಎನ್.ಐ.ಎ ಸ್ಪೆಷಲ್ ಕೋರ್ಟ್ ನೀಡಿರುವ ಜಾಮೀನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ನಾಲ್ವರಿಗೆ ನೋಟಿಸ್ ಜಾರಿಗೊಳಿಸಿದೆ.

- Advertisement -

ಈ ಸಂದರ್ಭದಲ್ಲಿ ಎನ್.ಐ.ಎ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಸಲ್ಲಿಸಿದ ಆಕ್ಷೇಪಣೆ ಪರಿಗಣಿಸಿರುವ ಪೀಠ, ತಮಿಳುನಾಡಿನ ರಸೂಲ್, ಸದ್ದಾಮ್, ಅಬ್ದುಲ್ ಮಹೀತು ಮತ್ತು ಸಾಕ್ರೆಟಿಸ್ ಎಂಬವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಶ್ರೀಲಂಕಾದ ಮುಗ್ಧ ಜನರನ್ನು ತಮಿಳ್ನಾಡು ಮೂಲಕ ಅಕ್ರಮವಾಗಿ ಭಾರತಕ್ಕೆ ತಂದು ಇಲ್ಲಿಂದ ಕೆನಡಾಕ್ಕೆ ಕಳ್ಳಸಾಗಣೆ ಮಾಡಲಾಗುತ್ತದೆ. ಇಲ್ಲಿಂದ ಸಾಗಣೆಯಾಗುವ ಪ್ರತಿ ಶ್ರೀಲಂಕಾ ಪ್ರಜೆಗೆ 3 ಲಕ್ಷದಿಂದ 10 ಲಕ್ಷದ ವರೆಗೆ ಪಡೆಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ಆರೋಪಿಗಳಿಗೆ ಶ್ರೀಲಂಕಾಕ್ಕೆ ಹೋಗಿ ಬರುವ ಸಮುದ್ರ ಮಾರ್ಗಗಳ ಪರಿಚಯ ಚೆನ್ನಾಗಿದ್ದು, ಜಾಮೀನು ನೀಡಿದರೆ ಅವರೆಲ್ಲರೂ ಕೂಡ ಪರಾರಿಯಾಗುವ ಸಾಧ್ಯತೆಯಿದೆ ಎಂದು ಎನ್.ಐ.ಎ ಆಕ್ಷೇಪಣಾ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಜಾಮೀನಿನ ಮೇಲಿರುವ ಆರೋಪಿಗಳನ್ನು ಮಂಗಳೂರಿನಲ್ಲಿ 2021ರ ಜೂನ್‌ 10ರಂದು ಬಂಧಿಸಲಾಗಿತ್ತು. ತಾತ್ಕಾಲಿಕ ಕೇಂದ್ರದಲ್ಲಿ ಸ್ಥಳವಿಲ್ಲದಿರುವ ಕಾರಣ 38 ಶ್ರೀಲಂಕಾ ಪ್ರಜೆಗಳಿಗೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಪ್ರತ್ಯೇಕ ಸೆಲ್‌ನಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.

Join Whatsapp