ಅಪಘಾತಕ್ಕೀಡಾದ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಡಿ.ಕೆ. ಶಿವಕುಮಾರ್

Prasthutha|

ಕುಣಿಗಲ್: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹುಲಿಯೂರು ದುರ್ಗದಲ್ಲಿ ಲಸಿಕಾ ಕಾರ್ಯಕ್ರಮ ಉದ್ಘಾಟಿಸಲು ತೆರಳುತ್ತಿರುವಾಗ, ಕುಣಿಗಲ್ ನ ಚಿಕ್ಕಕೆರೆ ಬಳಿ ಬೈಕ್ ನಿಂದ ಕೆಳಗೆ ಬಿದ್ದು ನರಳಾಡುತ್ತಿದ್ದ ಗಾಯಾಳುವನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದರು.

- Advertisement -

ಈ ವೇಳೆ ಡಿ.ಕೆ. ಶಿವಕುಮಾರ್ ಅವರ ಜತೆಗಿದ್ದ ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದರು. ನಂತರ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸುತ್ತಮುತ್ತಲಿನವರು ಪರದಾಡುತ್ತಿದ್ದಾಗ ಶಿವಕುಮಾರ್ ಅವರು ತಮ್ಮ ಕಾರಿನಲ್ಲಿಯೇ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿ, ರಂಗನಾಥ್ ಅವರ ಕಾರಿನಲ್ಲಿ ಹುಲಿಯೂರು ದುರ್ಗದ ಕಡೆ ಪ್ರಯಾಣ ಬೆಳೆಸಿದರು.



Join Whatsapp