ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ | ಮಾನವೀಯತೆ ಮೆರೆದ ಸಭಾಪತಿ ಬಸವರಾಜ ಹೊರಟ್ಟಿ

Prasthutha: June 26, 2021

ಚಿತ್ರದುರ್ಗ: ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಶನಿವಾರ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಓರ್ವ ಬಾಲಕ ಸೇರಿದಂತೆ ದಂಪತಿಯನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಿ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.


ಕಚೇರಿ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಬೆಂಗಳೂರಿನಿಂದ ತೆರಳುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿಯವರು ಮಾರ್ಗಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.


ಅಲ್ಲದೇ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು ಹಾಗೂ ಆಂಬುಲೆನ್ಸ್ ಗೆ ಕರೆಮಾಡಿ ಮೂವರು ಗಾಯಾಳುಗಳನ್ನು ಶೀಘ್ರದಲ್ಲಿಯೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು.
ಸುಮಾರು ಅರ್ಧ ಗಂಟೆಗಿಂತಲೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ದೊರಕಿಸುವಲ್ಲಿ ಶ್ರಮಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ