ನವದೆಹಲಿ: ತಿಹಾರ್ ಜೈಲಿನಲ್ಲಿ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಡಾ.ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದ ಒತ್ತಡಲ್ಲಿ ಏರುಪೇರಾದ ಕಾರಣ ಅವರನ್ನು ಹೆಚ್ಚಿನ ಪರೀಕ್ಷೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮೊದಲು ಅವರಿಗೆ ಐವಿ ಮೂಲಕ ದ್ರವಾಹಾರವನ್ನು ನೀಡಲಾಗುತ್ತಿತ್ತು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ತಿಹಾರ್ ಜೈಲಿನ ಜೈಲು ಸಂಖ್ಯೆ 7 ರಲ್ಲಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿ, ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಜುಲೈ 22 ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.