ಹಣವಿಲ್ಲದೇ ಪತ್ನಿಯ ಹೆಣವನ್ನು ಮೂಟೆಯಲ್ಲಿ ಹೊತ್ತೊಯ್ದ ಪತಿ

Prasthutha|

ಚಾಮರಾಜನಗರ: ಪತ್ನಿಯ ಶವವನ್ನು ಸಾಗಿಸಲು ಹಣವಿಲ್ಲದೇ ಮೂಟೆಯಲ್ಲಿ ಹೊತ್ತುಕೊಂಡು ಹೋದ ಹೃದಯ ವಿದ್ರಾವಕ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.


ಮಂಡ್ಯ ಮೂಲದ ಕಾಳಮ್ಮ(26) ಮೃತ ಮಹಿಳೆ. ಪತಿ ರವಿ ಮೂಟೆಯಲ್ಲಿ ಶವ ಸಾಗಿಸುತ್ತಿರುವಾಗ ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಯಳಂದೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಹತ್ತಿರ ಇರುವ ಆಲೆಮನೆಯಲ್ಲಿ ಕಳೆದ 15 ದಿನಗಳಿಂದ ವಾಸಿಸುತ್ತಿದ್ದ ರವಿ ಮತ್ತು ಆತನ ಹೆಂಡತಿ ಕಾಳಮ್ಮ ಪ್ಲಾಸ್ಟಿಕ್, ಗುಜರಿ ಸಾಮಗ್ರಿಗಳನ್ನು ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.

- Advertisement -


ಕಾಳಮ್ಮ ಅತಿ ಹೆಚ್ಚು ಮದ್ಯಪಾನ ಮಾಡಿದ್ದರಿಂದ ಸಾವನ್ನಪ್ಪಿದ್ದಳು. ಪತ್ನಿಯ ಶವವನ್ನು ರವಿ ಹೆಗಲ ಮೇಲೆ ಹೊತ್ತುಕೊಂಡು ಪಟ್ಟಣದ ಸುವರ್ಣವತಿ ನದಿ ಕಡೆ ಅಂತ್ಯಸಂಸ್ಕಾರ ಮಾಡಲು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಶವವನ್ನು ಚಾಮರಾಜನಗರದ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ, ಶವ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ. ಶವಪರೀಕ್ಷೆಯ ವರದಿಯ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪಿಎಸ್‌ಐ ತಿಳಿಸಿದ್ದಾರೆ.

- Advertisement -