ಮೂಡುಬಿದಿರೆ: ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪತ್ನಿಯನ್ನೇ ಕೊಲೆಗೈದಿರುವ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ದರೆಗುಡ್ಡೆಯ ಮಠ ಎಂಬಲ್ಲಿ ನಡೆದಿದೆ. ಮಠ ನಿವಸಿ ಸುನೀತಾ ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪತಿ ದಿನ್ ರಾಜ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ದಂಪತಿ ಮಧ್ಯೆ ಕೌಟುಂಬಿಕ ಕಲಹ ಉಂಟಾಗಿತ್ತು. ಈ ವೇಳೆ ಪತಿ ಮಾರಕಾಸ್ತ್ರದಿಂದ ಪತ್ನಿಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕಳೆದ ರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.