Home ಟಾಪ್ ಸುದ್ದಿಗಳು ಪತ್ನಿಯನ್ನು ಕೊಲೆ ಮಾಡಿದ ಪತಿ !

ಪತ್ನಿಯನ್ನು ಕೊಲೆ ಮಾಡಿದ ಪತಿ !

ಶಿವಮೊಗ್ಗ: ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಡೆದಿದೆ.


ಮೃತಳನ್ನು ಮಂಜುಳಾ (30) ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ದಿನೇಶ್ ಕೂಡ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡಿದ್ದಾನೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.


ದಿನೇಶ್ ಪ್ರತಿದಿನ ಮನೆಗೆ ತಡವಾಗಿ ಬರುತ್ತಿದ್ದ. ಇದೇ ಕಾರಣಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಮಂಗಳವಾರ ರಾತ್ರಿಯೂ ಇದೇ ವಿಚಾರಕ್ಕೆ ದಂಪತಿ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ದಿನೇಶ್ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿ ಮಂಜುಳಾ ಅವರ ಕುತ್ತಿಗೆ ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುಳಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಟ್ಟಿನಿಂದ ಕೊಲೆ ಮಾಡಿದ ದಿನೇಶ್, ಹೆದರಿ ತಾನೂ ಬ್ಲೇಡ್ ನಿಂದ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ದಿನೇಶ್ ಚಾಕುವಿನಿಂದ ಇರಿದಾಗ ಮಂಜುಳಾ ಅರಚಾಡಿದ್ದು, ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಮನೆಗೆ ತೆರಳಿದಾಗ ಮಂಜುಳಾ ಮೃತಪಟ್ಟಿದ್ದಳು. ಈ ಬಗ್ಗೆ . ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version