Home ಟಾಪ್ ಸುದ್ದಿಗಳು ಹಾಡಹಗಲೇ ಮಹಾನಗರ ಪಾಲಿಕೆ ಸದಸ್ಯೆಯ ಪತಿಯ ಬರ್ಬರ ಹತ್ಯೆ

ಹಾಡಹಗಲೇ ಮಹಾನಗರ ಪಾಲಿಕೆ ಸದಸ್ಯೆಯ ಪತಿಯ ಬರ್ಬರ ಹತ್ಯೆ

ವಿಜಯಪುರ: ಹಾಡಹಗಲೇ ಮಹಾನಗರಪಾಲಿಕೆ ಸದಸ್ಯೆಯ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.


ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ಹೈದರ್ ನದಾಫ್ ಮೃತರು.


ದುಷ್ಕರ್ಮಿಗಳು ನದಾಫ್ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.


ಘಟನೆ ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಆನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Join Whatsapp
Exit mobile version