ತವರು ಮನೆಗೆ ಹೋದಳೆಂದು ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

Prasthutha|

ಕಲಬುರಗಿ: ತವರು ಮನೆಗೆ ಹೋಗಿದ್ದ ಪತ್ನಿಯನ್ನು ಪತಿಯೇ ಗುಂಡಿಟ್ಟು ಕೊಂದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ್ ಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನಮವ್ವ (36) ಕೊಲೆಯಾದ ಮಹಿಳೆ. ಆಕೆಯ ಗಂಡ ಬಸವರಾಜ್ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಮದುವೆ ಆದಾಗಿಂದ ಗಂಡ-ಹೆಂಡತಿ ನಡುವೆ ನಿರಂತರ ಜಗಳವಾಗುತ್ತಿದ್ದು, ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಆದರೆ ಇಂದು ಬೆಳಗ್ಗೆ ತವರು ಮನೆಯಲ್ಲಿದ್ದ ಪತ್ನಿಯನ್ನು ಬಸವರಾಜ್ ಗುಂಡಿಟ್ಟು ಕೊಲೆ ಮಾಡಿದ್ದಾನೆ.

- Advertisement -

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Join Whatsapp