ಹೈದರಾಬಾದ್: ಒಂದು ತಿಂಗಳ ಹಿಂದೆ ತೆಲಂಗಾಣದಲ್ಲಿ ಭಾರಿ ಆಕ್ರೋಶ ಮತ್ತು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ವಯಸ್ಕರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಶಾಸಕರೊಬ್ಬರ ಪುತ್ರ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಾಲಾಪರಾಧಿ ಗೃಹದಿಂದ ಬಿಡುಗಡೆ ಮಾಡಲಾಗಿದ್ದು, ಬಾಲನ್ಯಾಯ ಮಂಡಳಿಯಿಂದ ಜಾಮೀನು ನೀಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಬಂಧಿತನಾಗಿರುವ ಐದನೇ ಅಪ್ರಾಪ್ತ ವಯಸ್ಕನ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್ ಅನ್ನು ಸಂಪರ್ಕಿಸಿರುವುದರಿಂದ ಬಾಲಾಪರಾಧಿ ಗೃಹದಲ್ಲಿ ಮುಂದುವರಿಯುತ್ತಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಏಕೈಕ ವಯಸ್ಕ ಆರೋಪಿ ಸಾದುದ್ದೀನ್ ಮಲ್ಲಿಕ್ ಸದ್ಯ ಜೈಲಿನಲ್ಲಿಯೇ ಇದ್ದಾನೆ.
ಮೇ 28 ರಂದು ಹೈದರಾಬಾದ್ನ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿತ್ತು.