Home ಟಾಪ್ ಸುದ್ದಿಗಳು ಹೈದರಾಬಾದ್: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಗುಂಪುಹತ್ಯೆ

ಹೈದರಾಬಾದ್: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಗುಂಪುಹತ್ಯೆ

ಹೈದರಾಬಾದ್: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ವ್ಯಕ್ತಿಯನ್ನು ಗುಂಪೊಂದು ಥಳಿಸಿ ಹತ್ಯೆ ನಡೆಸಿರುವ ಘಟನೆ ಹೈದರಾಬಾದ್’ನ ಜವಾಹರ್ ನಗರದಲ್ಲಿ ನಡೆದಿದೆ.

ಮೃತರನ್ನು ಕೌಕೂರಿನ ನಿವಾಸಿ ಯೇಸು ಅಕಾ ರಾಜು ಎಂದು ಗುರುತಿಸಲಾಗಿದ್ದು, ಹಾಲು ಮಾರಾಟ ನಡೆಸುವ ಮಹಿಳೆಯೊಬ್ಬರ ಮೇಲೆ ಲೈಂಗಿನ ದೌರ್ಜನ್ಯಕ್ಕೆ ಯತ್ನಿಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಆರೋಪಿ ರಾಜುವನ್ನು ಮಹಿಳೆಯ ಸಂಬಂಧಿಕರು ಮತ್ತು ಸ್ಥಳೀಯರು ಹಿಡಿದು, ಆತನ ದುಷ್ಕೃತ್ಯಕ್ಕೆ ಥಳಿಸಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜವಾಹರ ನಗರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version