ಹೈದರಾಬಾದ್’ನಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಪೊಲೀಸರ ಮೇಲೆ ಕಲ್ಲು ತೂರಾಟ: ಸಬ್ ಇನ್ಸ್‌ಪೆಕ್ಟರ್ ಗೆ ಗಂಭೀರ ಗಾಯ

Prasthutha|

ಹೈದರಾಬಾದ್: ಹೈದರಾಬಾದ್ ಸಮೀಪದ ಕರ್ಮಾನ್ ಘಾಟ್’ನಲ್ಲಿ ಸಂಘಪರಿವಾರದ ಕಾರ್ಯಕರ್ತರು ಪೊಲೀಸರಿಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ವನಸ್ಥಲಿಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಎಸ್.ಐ) ತಲೆಗೆ ಗಂಭೀರವಾದ ಗಾಯಗಳಾಗಿವೆ.

- Advertisement -

ಗಾಯಗೊಂಡ ಎಸ್.ಐ ಎಸ್.ಐ ಮಾಧವ ರೆಡ್ಡಿ ಅವರನ್ನು ನರ-ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಕಾಮಿನೇನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವನಸ್ಥಲಿಪುರಂ ಇನ್ಸ್‌ಪೆಕ್ಟರ್ ಕೆ. ಸತ್ಯನಾರಾಯಣ ತಿಳಿಸಿದ್ದಾರೆ.
ಗಾಯಗೊಂಡಿರುವ ಎಸ್.ಐ ಮಾಧವ ರೆಡ್ಡಿ ಅವರನ್ನು ಶಸ್ತ್ರಚಿಕಿತ್ಸೆಯ ಬಳಿಕ ಡಿಸ್ಚಾರ್ಜ್ ಮಾಡಲಾಗುವುದೆಂದು ಡಿಸಿಪಿ ಸಂಪ್ರೀತ್ ಸಿಂಗ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಕರ್ಮಾನ್ ಘಾಟ್’ನಲ್ಲಿ ಜಾನುವಾರು ಸಾಗಾಟದ ವಿರುದ್ಧ ಧರಣಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದಾಗ ಎಸ್.ಐ. ಮಾಧವ ರೆಡ್ಡಿ ಗಾಯಗೊಂಡರು.

- Advertisement -

ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಸಂಘಪರಿವಾರದ ಕಾರ್ಯಕರ್ತರು ಅದರಲ್ಲಿದ್ದವರಿಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಎಸ್.ಐ. ಮಾಧವ ರೆಡ್ಡಿ ಅವರ ಮೇಲೆ ಸಂಘಪರಿವಾರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ರೆಡ್ಡಿ ಅವರು ಸಮೀಪದ ಹನುಮಾನ್ ದೇವಸ್ಥಾನದತ್ತ ಓಡಿ ಜೀವ ಉಳಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ಆರಂಭಿಸಿದ ಬಳಿಕ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ.

Join Whatsapp