ಹೈದರಾಬಾದ್: ಇಬ್ಬರು ತೃತೀಯಲಿಂಗಿಗಳ ಹತ್ಯೆ

Prasthutha|

ನವದೆಹಲಿ: ಇಬ್ಬರು ತೃತೀಯಲಿಂಗಿಗಳನ್ನು ಹತ್ಯೆ ಮಾಡಿದ ಘಟನೆ ಹೈದರಾಬಾದ್ ನ ಓಲ್ಡ್ ಸಿಟಿ ಪ್ರದೇಶದ ತಪ್ಪಚಬುತ್ರ ಪೊಲೀಸ್ ಠಾಣೆ ವ್ಯಾಪ್ತಿಯ ಡೈಬಾಗ್ ನಲ್ಲಿ ಬುಧವಾರ ಮುಂಜಾನೆ ನಡೆದಿದೆ.

- Advertisement -


ಮೃತರನ್ನು ಯೂಸುಫ್ ಅಲಿಯಾಸ್ ಡಾಲಿ ಮತ್ತು ರಿಯಾಜ್ ಅಲಿಯಾಸ್ ಸೋಫಿಯಾ ಎಂದು ಗುರುತಿಸಲಾಗಿದೆ.


ಪ್ರತ್ಯೇಕ ಸ್ಥಳದಲ್ಲಿ ತಮ್ಮ ಆಕ್ಟಿವಾದಲ್ಲಿ ತಪ್ಪಚಬುತ್ರಾಕ್ಕೆ ಅವರ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಕೋರರು ಅವರನ್ನು ದಾರಿ ತಪ್ಪಿಸಿ ದೊಡ್ಡ ಕಲ್ಲುಗಳು ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -


ಸುದ್ದಿ ತಿಳಿದ ಪೊಲೀಸರು ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.